ಕರ್ನಾಟಕ

karnataka

ETV Bharat / state

ಸಿಎಂ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡಲು ಮುಂದಾದ ಶಾಸಕ - corona news

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ನಷ್ಟವಾಗಲಿದೆ. ಇಂತಹ ಸಂದರ್ಭದಲ್ಲಿ ನಾವು ಸರ್ಕಾರದೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದ್ದಾರೆ.

ಬಿಜೆಪಿ ಶಾಸಕ ಹಾಲಪ್ಪ ಆಚಾರ್
ಬಿಜೆಪಿ ಶಾಸಕ ಹಾಲಪ್ಪ ಆಚಾರ್

By

Published : Mar 26, 2020, 6:46 PM IST

ಕೊಪ್ಪಳ: ಮಹಾಮಾರಿ ಕೊರೊನಾ‌ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಸಿಎಂ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನವನ್ನು ನೀಡುವುದಾಗಿ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಪ್ಪ ಆಚಾರ್ ಘೋಷಿಸಿದ್ದಾರೆ.

ಈ ಕುರಿತಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ತಮ್ಮ ಒಂದು ತಿಂಗಳ ವೇತನ ನೀಡುವುದಾಗಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಾಕ್ ಡೌನ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿಯೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ನಷ್ಟವಾಗಲಿದೆ. ಇಂತಹ ಸಂದರ್ಭದಲ್ಲಿ ನಾವು ಸರ್ಕಾರದೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.

ಸಿಎಂ ಪರಿಹಾರ ನಿಧಿಗೆ ತಿಂಗಳ ಸಂಬಳ ನೀಡಲು ಮುಂದಾದ ಶಾಸಕ

ABOUT THE AUTHOR

...view details