ಗಂಗಾವತಿ:ಕೇಂದ್ರ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಹಾಗೂ ಕೃತಕ ಗರ್ಭಧಾರಣೆ ಕಾರ್ಯಕ್ರಮಕ್ಕೆ ಸಂಸದ ಕರಡಿ ಸಂಗಣ್ಣ, ಗೋವಿಗೆ ಗೋಗ್ರಾಸ ತಿನ್ನಿಸುವ ಮೂಲಕ ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ಯೋಜನೆಗೆ ಚಾಲನೆ ನೀಡಿದ ಸಂಸದ ಕರಡಿ ಸಂಗಣ್ಣ
ಕೇಂದ್ರ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಹಾಗೂ ಕೃತಕ ಗರ್ಭಧಾರಣೆ ಕಾರ್ಯಕ್ರಮಕ್ಕೆ ಸಂಸದ ಕರಡಿ ಸಂಗಣ್ಣ, ಗೋವಿಗೆ ಗೋಗ್ರಾಸ ತಿನ್ನಿಸುವ ಮೂಲಕ ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಚಾಲನೆ ನೀಡಿದರು.
ಉತ್ತರಪ್ರದೇಶದ ಮಥುರಾದಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಕಾರ್ಯಕ್ರಮವನ್ನು ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನಿ ಹಾಗೂ ರೈತರೊಂದಿಗೆ ಸಂಸದರು ನೇರ ಪ್ರಸಾರ ವೀಕ್ಷಿಸಿದರು. ಬಳಿಕ ಕೇಂದ್ರ ಸರ್ಕಾರದ ನಿರ್ದೇಶನದಂತೆ ಇಲ್ಲಿನ ಕೃಷಿ ವಿಜ್ಞಾನ ಮತ್ತು ಕೃಷಿ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಗೋವಿಗೆ ಆಹಾರ ತಿನ್ನಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಕೃಷಿ, ಪಶುಪಾಲನಾ ಮತ್ತು ವಿಜ್ಞಾನ ಕೇಂದ್ರದ ಅಧಿಕಾರಿಗಳು ಪಾಲ್ಗೊಂಡಿದ್ದರು.