ಗಂಗಾವತಿ: ಇತ್ತೀಚಿನ ದಿನಗಳಲ್ಲಿ ಭತ್ತದ ಕೃಷಿ ಚಟುವಟಿಕೆ ಕೈಗೊಳ್ಳಲು ಕೂಲಿಗಳ ಕೊರತೆ ಎದುರಾಗಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇದನ್ನು ನಿವಾರಿಸುವ ಸಂಬಂಧ ಇದೀಗ ಭತ್ತದ ಯಂತ್ರದಿಂದ ನಾಟಿ ಮಾಡಿದರೆ ರೈತರಿಗೆ ಆರ್ಥಿಕ ಹೊರೆ ತಗ್ಗುತ್ತದೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.
ಕೃಷಿ ವಿಜ್ಞಾನ ಕೇಂದ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹಣವಾಳ ಗ್ರಾಮದ ರೈತರ ಹೊಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಯಂತ್ರದ ಮೂಲಕ ನಾಟಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಸಂಸದ ಕರಡಿ ಸಂಗಣ್ಣ ಮಾತನಾಡಿದರು. ನೀರಾವರಿ ಪ್ರದೇಶದಲ್ಲಿನ ಕೃಷಿ ಚಟುವಟಿಕೆಯಲ್ಲಿ ಕೂಲಿಗಳ ಅಗತ್ಯ ಹೆಚ್ಚಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೂಲಿಕಾರರ ಕೊರತೆ ಕಂಡು ಬರುತ್ತಿದ್ದು, ರೈತರು ಇಂತಹ ಆಧುನಿಕ ಯಂತ್ರಗಳ ನೆರವು ಪಡೆದುಕೊಂಡರೆ ಕೃಷಿ ಕಾರ್ಯ ಸುಲಭವಾಗಲಿದೆ ಎಂದರು.