ಕೊಪ್ಪಳ :ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತೆಗೆದುಕೊಂಡ ನಿರ್ಧಾರಗಳು ವಿಶ್ವವ್ಯಾಪಿ ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಸಂಸದ ಸಂಗಣ್ಣ ಕರಡಿ ಬಣ್ಣಿಸಿದರು.
ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2ನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸೀಲ್ಡೌನ್,ಲಾಕ್ಡೌನ್ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ತೊಂದರೆಯಾಗಿತ್ತು. ಹೀಗಾಗಿ ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಸರ್ಕಾರ ₹20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿತು. ಮೋದಿ ಅವರ ಅನೇಕ ದಿಟ್ಟ ಕ್ರಮಗಳಿಂದ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದು ಬಣ್ಣಿಸಿದರು.