ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದಿರುವ ಧನ ಸಂಗ್ರಹಣೆ ಅಭಿಯಾನಕ್ಕೆ ಸಂಸದ ಸಂಗಣ್ಣ ಕರಡಿ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಸಂಸದ ಸಂಗಣ್ಣ ಕರಡಿ ನೀಡಿದ ದೇಣಿಗೆ ಎಷ್ಟು ಗೊತ್ತಾ? - ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ 5 ಲಕ್ಷ ದೇಣಿಗೆ ನೀಡಿದ ಸಂಸದ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕಾಗಿ ಧನ ಸಂಗ್ರಹಣೆ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
MP Sanganna karadi
ಇಡೀ ದೇಶಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡಲಾಗುತ್ತಿದ್ದು, ಅದರಂತೆ ಜಿಲ್ಲೆಯಲ್ಲಿಯೂ ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಸಂಸದ ಸಂಗಣ್ಣ ಕರಡಿ ಸಹ ಪಾಲ್ಗೊಂಡು ನಿಧಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸಂಸದ ಸಂಗಣ್ಣ ಕರಡಿಯವರು 5 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಪ್ರಾಚೀನ ಪರಂಪರೆಗೆ ಅನುಗುಣವಾಗಿ ಶ್ರೀರಾಮಂದಿರ ನಿರ್ಮಾಣಕ್ಕಾಗಿ ಉದಾರವಾಗಿ ದೇಣಿಗೆ ನೀಡಿ, ಈ ಪವಿತ್ರ ಯಜ್ಞದಲ್ಲಿ ಸಮಸ್ತ ಸಮಾಜದ ಬಾಂಧವರು ಸಹಕಾರ ನೀಡುವುಂತೆ ಸಂಸದರು ಮನವಿ ಮಾಡಿದ್ದಾರೆ.