ಕೊಪ್ಪಳ: ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿದ್ದರು. ಭಾಗ್ಯನಗರದ ವಿದ್ಯಾ ವಿಕಾಸ ಶಾಲೆಯಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರ ಸೇರಿದಂತೆ ಕೆಲ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು.
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಂಸದ ಸಂಗಣ್ಣ ಕರಡಿ ಭೇಟಿ - ಕೊಪ್ಪಳ ಸಂಸದ ಸಂಗಣ್ಣ ಕರಡಿ ಸುದ್ದಿ
ಭಾಗ್ಯನಗರದ ವಿದ್ಯಾ ವಿಕಾಸ ಶಾಲೆಯಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರ ಸೇರಿದಂತೆ ಕೆಲ ಪರೀಕ್ಷಾ ಕೇಂದ್ರಗಳಿಗೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಸಂಸದ ಸಂಗಣ್ಣ ಕರಡಿ ಭೇಟಿ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಕಾಳಜಿ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಸ್ಥಳದಲ್ಲಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಂದ ಸಂಸದರು ಮಾಹಿತಿ ಪಡೆದರು.
ಅಲ್ಲದೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.