ಗಂಗಾವತಿ(ಕೊಪ್ಪಳ):ಕನಕಗಿರಿ ವಿಧಾನಸಭಾ ಕ್ಷೇತ್ರದ ಹುಲಿಹೈದರ ಗ್ರಾಮದಲ್ಲಿ ನಡೆದ ಇಬ್ಬರ ಕೊಲೆ ಮತ್ತು ಕೋಮು ಘರ್ಷಣೆಗೆ ಸ್ಥಳೀಯ ಪೊಲೀಸರು ಮತ್ತು ಕ್ಷೇತ್ರದ ಶಾಸಕ ಬಸವರಾಜ ದಢೇಸ್ಗೂರು ನೇರ ಹೊಣೆ ಎಂದು ಕಾಂಗ್ರೆಸ್ ಮುಖಂಡ ಕೆಪಿಸಿಸಿ ವಕ್ತಾರ ಮುಕುಂದರಾವ್ ಭವಾನಿಮಠ ಆರೋಪಿಸಿದ್ದಾರೆ.
ಈ ಬಗ್ಗೆ ಅವರು 'ಈಟಿವಿ ಭಾರತ'ದೊಂದಿಗೆ ಮಾತನಾಡಿ, ಅಸಮರ್ಥ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡು ತಂದು ಪ್ರತಿಷ್ಠಾಪಿಸುತ್ತಿರುವ ಶಾಸಕ ಈ ಪ್ರಕರಣ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.