ಗಂಗಾವತಿ:ನಗರಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನಿಡಿದ್ದರು. ಈ ವೇಳೆ ಆದಾಯ ಸಂಗ್ರಹದ ಬಗ್ಗೆ ತಪ್ಪು ಮಾಹಿತಿ ನೀಡಿದ ನಗರಸಭೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಆದಾಯ ಸಂಗ್ರಹದ ಬಗ್ಗೆ ತಪ್ಪು ಮಾಹಿತಿ ನೀಡಿದ ನಗರಸಭೆ ಅಧಿಕಾರಿಗಳಿಗೆ ಡಿಸಿ ತರಾಟೆ - ತಪ್ಪು ಮಾಹಿತಿ ನೀಡಿದ ನಗರಸಭೆ ಅಧಿಕಾರಿ
ನಗರಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನಿಡಿದ್ದರು. ಈ ವೇಳೆ ಆದಾಯ ಸಂಗ್ರಹದ ಬಗ್ಗೆ ತಪ್ಪು ಮಾಹಿತಿ ನೀಡಿದ ನಗರಸಭೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ನಗರಸಭೆಯ ಆದಾಯದಲ್ಲಿ ಉಂಟಾಗುತ್ತಿರುವ ಸೋರಿಕೆಯ ಸಂಬಂಧ ಇಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಂಗ್ರಹವಾಗುತ್ತಿರುವ ಆದಾಯ, ಬಾಕಿ ಉಳಿದ ತೆರಿಗೆಯ ಕುರಿತು ಮಾಹಿತಿ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ನಗರದಲ್ಲಿ ಒಟ್ಟು 1800ರಿಂದ 2000 ಸಾವಿರ ವಾಣಿಜ್ಯ ಉದ್ದೇಶಿತ ಅಂಗಡಿಗಳಿವೆ. ಕಳೆದ ಮೂರು ವರ್ಷದಿಂದ ಸರಿಯಾಗಿ ತೆರಿಗೆ ಪಾವತಿಸುತ್ತಿಲ್ಲ ಎಂದು ನಗರಸಭೆ ಕಂದಾಯ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ಇದರಿಂದ ಅಸಮಾಧಾನಗೊಂಡ ಜಿಲ್ಲಾಧಿಕಾರಿಗಳು, ಸುಳ್ಳು ಮಾಹಿತಿ ನೀಡುತ್ತಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಸಮೀಕ್ಷೆ ನಡೆಸುವಂತೆ ತಾಕೀತು ಮಾಡಿದರು.