ಕೋಲಾರ:ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ಕೊಲೆಯಾದವರು.
ಇಂದು ಬೆಳಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತರ ಗುಂಪೊಂದು ಜಗನ್ ಮೋಹನ್ ಅವರ ಮೇಲೆ ದಾಳಿ ಮಾಡಿ ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎನ್ನಲಾಗ್ತಿದೆ.