ಕೊಪ್ಪಳ:ತುಂಗಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶದ ಎರಡನೇ ಬೆಳೆಗೆ ವಿವಿಧ ಕಾಲುವೆಗಳಿಗೆ ನೀರು ಹರಿಸುವ ಕುರಿತಂತೆ ಡಿಸಿಎಂ ಲಕ್ಷ್ಮಣ್ ಸವದಿ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯುತ್ತಿದೆ.
ಅಚ್ಚುಕಟ್ಟು ಪ್ರದೇಶದ ಎರಡನೇ ಬೆಳೆಗೆ ನೀರು: ಡಿಸಿಎಂ ನೇತೃತ್ವದಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ - munirabad ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಸುದ್ದಿ
ಅಚ್ಚುಕಟ್ಟು ಪ್ರದೇಶದ ಎರಡನೇ ಬೆಳೆಗೆ ತುಂಗಭದ್ರಾ ಜಲಾಶಯದಿಂದ ವಿವಿಧ ಕಾಲುವೆಗಳಿಗೆ ನೀರು ಹರಿಸುವ ಕುರಿತಂತೆ ಡಿಸಿಎಂ ಲಕ್ಷ್ಮಣ್ ಸವದಿ ಅಧ್ಯಕ್ಷತೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯುತ್ತಿದೆ.
ತಾಲೂಕಿನ ಮುನಿರಾಬಾದ್ ನಲ್ಲಿರುವ ಕಾಡಾ ಕಚೇರಿ ಸಭಾಂಗಣದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಅಧ್ಯಕ್ಷತೆಯಲ್ಲಿ ಸಲಹಾ ಸಮಿತಿ ಸಭೆ ನಡೆಯುತ್ತಿದೆ. ತುಂಗಭದ್ರಾ ಕಾಡಾ ಅಧ್ಯಕ್ಷ ಬಸವನಗೌಡ ತುರ್ವಿಹಾಳ ಸೇರಿದಂತೆ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆಗೆ ಈ ವರ್ಷ 71.813 ಟಿಎಂಸಿ ಬಂದಿದೆ. ನವೆಂಬರ್ 30 ರವರಗೆ 36.294 ಟಿಎಂಸಿ ನೀರು ಖರ್ಚಾಗುತ್ತೆ. ಇನ್ನು, ಡಿಸೆಂಬರ್ 1 ಕ್ಕೆ 36.519 ಟಿಎಂಸಿ ಉಳಿಯುತ್ತದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿರುವ ಒಟ್ಟು ನೀರಿನ ಲಭ್ಯತೆ ಆಧಾರದ ಮೇಲೆ ನಾಲೆಗೆ ನೀರು ಹರಿಸುವ ಕುರಿತಂತೆ ಸಭೆಯ ಬಳಿಕ ಘೋಷಣೆಯಾಗಲಿದೆ.