ಗಂಗಾವತಿ: ನಗರದಲ್ಲಿ ಮುಸ್ಲಿಂ ಸಮುದಾಯ ನಡೆಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಪೊಲೀಸ್ ಇಲಾಖೆ ಸರ್ಪಗಾವಲು ಹಾಕಿದ್ದಾರೆ.
ಕೇಂದ್ರದ ಎನ್ಆರ್ಸಿ, ಸಿಎಎ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆ: ಪೊಲೀಸ್ ಇಲಾಖೆಯಿಂದ ಭದ್ರತೆ - ಗಂಗಾವತಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಎನ್ಆರ್ಸಿ ಮತ್ತು ಸಿಎಎಗಳನ್ನು ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಇಲ್ಲಿನ ಈದ್ಗಾ ಮೈದಾನದಲ್ಲಿನ ಸ್ವಚ್ಛತೆ ಹಾಗೂ ಸಿದ್ಧತೆ ಬಳಿಕ ನಗರದಲ್ಲಿ ಮುಸ್ಲಿಂ ಸಮುದಾಯ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ. ಇನ್ನು ಐವತ್ತಕ್ಕೂ ಹೆಚ್ಚು ಅಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಈದ್ಗಾ ಮೈದಾನ ಸಂಪರ್ಕಿಸುವ ಬಹುತೇಕ ರಸ್ತೆಗಳ ಮೇಲೆ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ.
ನೂರಕ್ಕೂ ಹೆಚ್ಚು ಮುಫ್ತಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಮುಸ್ಲಿಂ ಸಮುದಾಯದ ಸುಮಾರು ಎರಡು ಸಾವಿರ ಜನ ಹಾಗೂ ಪ್ರಗತಿಪರ ಸಂಘಟನೆ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಾಂಕೇತಿಕ ಸಭೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
TAGGED:
gangavathi protest news