ಕೊಪ್ಪಳ:ಉಸಿರಾಟದ ತೊಂದರೆಯಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಗೆ ಸಂಬಂಧಿಕರು ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಅಂತ್ಯಕ್ರಿಯೆ ನೆರವೇರಿಸಿದರು.
ಕೊಪ್ಪಳದ ವಿಕಾಸ್ ನಗರದ ವ್ಯಕ್ತಿಯೊಬ್ಬರು ನಿನ್ನೆ ರಾತ್ರಿ ತೀವ್ರ ಉಸಿರಾಟ ಸಮಸ್ಯೆಯಿಂದ ಅಸುನೀಗಿದ್ದರು. ಮೃತನ ಮಗ ಕೂಡ ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಇದ್ದಾರೆ. ಹೀಗಾಗಿ, ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಲು ಜನ ಹಿಂದೇಟು ಹಾಕಿದ್ದಾರೆ. ಈ ವೇಳೆ ಮುಸ್ಲಿಂ ಸಂಘಟನೆ ಹ್ಯೂಮನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್ಆರ್ಎಸ್) ಯ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದರು.