ಗಂಗಾವತಿ: ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಸುಪ್ರಸಿದ್ದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ಯದುವಂಶದ ಅರಸರಾಗಿರುವ ಯದುವೀರ ಒಡೆಯರ್ ದಂಪತಿ ಸಮೇತ, ಕುಟುಂಬ ಸದಸ್ಯರೊಂದಿಗೆ ಸೋಮವಾರ ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮೊದಲು ಬೆಟ್ಟದ ಕೆಳಗೆ ಇರುವ ಪಾದಗಟ್ಟೆಯಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುಟುಂಬದ ಸದಸ್ಯರೊಂದಿಗೆ 575ಮೆಟ್ಟಿಲುಗಳನ್ನು ಹತ್ತಿ ಹನುಮಂತ ದೇವರ ದರ್ಶನ ಪಡೆದರು.