ಕರ್ನಾಟಕ

karnataka

ETV Bharat / state

ರೈಲ್ವೆ ಕೆಳ‌ ಸೇತುವೆ ದುರಸ್ತಿ ಕಾರ್ಯಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಪ್ರತಿಭಟನೆ - Koppala protest

ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ರೈಲ್ವೆ ಕೆಳ‌ ಸೇತುವೆಯನ್ನು ಸರಿಪಡಿಸುವಂತೆ ನಾಗರಿಕ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಹಾಗೂ ನಗರದ ನಿವಾಸಿಗಳು ಇಂದು ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Protests in Koppala
ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ

By

Published : Oct 22, 2020, 3:57 PM IST

ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ದುರಸ್ತಿಗೊಂಡ ರೈಲ್ವೆ ಕೆಳ‌ ಸೇತುವೆಯಿಂದಾಗಿ ಸಾರ್ವಜನಿಕರಿಗೆ ಅತೀವ ತೋಂದರೆಯಾಗುತ್ತಿದ್ದು, ಈ ಕೂಡಲೇ ಸೇತುವೆಯನ್ನು ರಿಪೇರಿಗೊಳಿಸುವಂತೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಹಾಗೂ ವಿವಿಧ‌ ಕಾಲೋನಿಗಳ ನಿವಾಸಿಗಳು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ

ನಗರದ ಅಶೋಕ ಸರ್ಕಲ್​​ನಲ್ಲಿ ಪ್ರತಿಭಟನೆ ನಡೆಸಿದ ನಿವಾಸಿಗಳು, ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಬರುವ 26 ನೇ ವಾರ್ಡ್, ಭಾಗ್ಯನಗರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ18 ಮತ್ತು 19 ನೇ ವಾರ್ಡ್ ಮತ್ತು ಚಿಲವಾಡಗಿ, ಕಲಕೇರಿ, ಕಿನ್ನಾಳ ಸೇರಿದಂತೆ ಅನೇಕ ಗ್ರಾಮಗಳ ಜನರು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಆದರೆ ರೈಲ್ವೆ ಸೇತುವೆ ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಕೂಡಿದ್ದರಿಂದ ಮಳೆಗಾಲದಲ್ಲಿ ಚರಂಡಿ ನೀರು ಕೆಳಸೇತುವೆಯಲ್ಲಿ ಸಂಗ್ರಹವಾಗುತ್ತಿದೆ. ಇದರಿಂದಾಗಿ ಇಲ್ಲಿ ಸಂಚಾರ ಮಾಡುವುದು ತುಂಬಾ ಕಷ್ಟಕರವಾಗುತ್ತಿದೆ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆದಷ್ಟು ಬೇಗ ರೈಲ್ವೆ ಕೆಳ ಸೇತುವೆಯ ಶಾಶ್ವತ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು, ಕೆಳ ಸೇತುವೆಯಿಂದ ಭಾಗ್ಯನಗರ ಕ್ರಾಸ್​​ವರೆಗೆ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ, ಎಫ್​ಸಿಐ ಗೋದಾಮನ್ನು ಹೊರ ವಲಯಕ್ಕೆ ಸ್ಥಳಾಂತರಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ABOUT THE AUTHOR

...view details