ಗಂಗಾವತಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಕೂಲಿ ಕೆಲಸದಲ್ಲಿ ತೊಡಗಿಕೊಂಡಿರುವ ನಾವು ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿಲ್ಲ ಎಂದು ಕೂಲಿ ಕಾರ್ಮಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದ ಘಟನೆ ತಾಲೂಕಿನ ವೆಂಕಟಗಿರಿ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು.
ರೋಗದ ಲಕ್ಷಣಗಳಿಲ್ಲ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದ ಕೂಲಿ ಕಾರ್ಮಿಕರು.. - narega plan implement in koppal
ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಕೊರೊನಾ ಪ್ರಾಥಮಿಕ ಲಕ್ಷಣಗಳಿಂದ ಬಳಲುತ್ತಿಲ್ಲ ಎಂದು ಕಾರ್ಮಿಕರು ಪ್ರಮಾಣ ಮಾಡಿದರು.
ಪ್ರತಿಜ್ಞಾ ವಿಧಿ ಸ್ವೀಕರಿಸಿದ ಕಾರ್ಮಿಕರು
ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪಂಚಾಯತ್ ಸದಸ್ಯ ಲಕ್ಷ್ಮವ್ವ ಭೇಟಿ ನೀಡಿ, ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದರು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು. ಕೊರೊನಾ ಪ್ರಾಥಮಿಕ ಲಕ್ಷಣಗಳಿಂದ ಬಳಲುತ್ತಿಲ್ಲ ಎಂದು ಕಾರ್ಮಿಕರು ಪ್ರಮಾಣ ಮಾಡಿದರು. ತಾಲೂಕು ಪಂಚಾಯತ್ ಇಒ ಮೋಹನ್ ಇದ್ದರು.