ಕರ್ನಾಟಕ

karnataka

ETV Bharat / state

ಕೊಪ್ಪಳ : ಔಷಧಿ ಬಾಕ್ಸ್​ನಲ್ಲಿ ನವಜಾತ ಶಿಶುವಿನ ಶವ ಪತ್ತೆ - ಹೆಣ್ಣು ಶಿಶುವಿನ ಶವ ಪತ್ತೆ

ಔಷಧಿ ಬಾಕ್ಸ್​ನಲ್ಲಿಟ್ಟು ನವಜಾತ ಹೆಣ್ಣು ಮಗುವಿನ ಶವವನ್ನು ಎಸೆದುಹೋಗಿರುವ ಘಟನೆ ಕೊಪ್ಪಳದ ಕುಷ್ಟಗಿಯಲ್ಲಿ ನಡೆದಿದೆ.

newborn baby found dead in Koppala
ಕೊಪ್ಪಳ : ಔಷಧಿ ಬಾಕ್ಸ್​ನಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆ

By ETV Bharat Karnataka Team

Published : Jan 4, 2024, 10:31 PM IST

ಕೊಪ್ಪಳ: ಔಷಧಿ ಬಾಕ್ಸ್​ನಲ್ಲಿ ನವಜಾತ ಹೆಣ್ಣು ಮಗುವಿನ ಮೃತದೇಹವನ್ನು ಇಟ್ಟು ಬಸ್ ನಿಲ್ದಾಣದ ಹಿಂಬದಿಯ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿರುವ ಘಟನೆ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.

ಕುಷ್ಟಗಿ ಬಸ್ ನಿಲ್ದಾಣದ ಕಂಪೌಂಡ್​ಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಅವಧಿ ಪೂರ್ಣವಾಗದೇ ಜನಿಸಿದ ನವಜಾತ ಶಿಶುವಿನ ಮೃತ ದೇಹ ಪತ್ತೆಯಾಗಿದೆ. ಈ ಮೃತದೇಹವನ್ನು ನಾಯಿಗಳು ಎಳೆದಾಡುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸ್ ಠಾಣೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋದರು.

ಅನುಮಾನ ಹುಟ್ಟಿಸಿದ ಬಾಕ್ಸ್ :ನವಜಾತ ಶಿಶುವಿನ ಮೃತದೇಹ ಸರ್ಕಾರಿ ಆಸ್ಪತ್ರೆಯ ಇಂಜೆಕ್ಷನ್ ಬಾಕ್ಸ್​ನಲ್ಲಿ ಬಟ್ಟೆಯಲ್ಲಿರುವ ಸುತ್ತಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಮೃತ ದೇಹದ ಹೊಕ್ಕುಳ ಬಳ್ಳಿಗೆ ಸ್ಟಿಚ್​ ಹಾಕಿದ್ದು, ಈ ಮಗು ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಅವಧಿ ಪೂರ್ಣವಾಗದೇ ಜನಿಸಿರುವ ಶಿಶುವಾಗಿದೆ. ಬಾಕ್ಸನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಕುಷ್ಟಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರತ್ಯೇಕ ಪ್ರಕರಣ :ಬೆಳಗಾವಿಯಲ್ಲಿ ಗಂಡು ಮಗುವಿನ ಶವ ಪತ್ತೆ :ನವಜಾತ ಗಂಡು ಶಿಶುವಿನ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟು ಚರಂಡಿಗೆ ಎಸೆದಿದ್ದ ಘಟನೆ ಇತ್ತೀಚೆಗೆ ಬೆಳಗಾವಿಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಇತ್ತೀಚಿಗೆ ನಡೆದಿತ್ತು. ಘಟಪ್ರಭಾ ಪಟ್ಟಣದ ಕಲಾಲ್ ಓಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಹತ್ಯೆ ಮಾಡಿ ಬಳಿಕ ಪ್ಲಾಸ್ಟಿಕ್ ಚೀಲದಲ್ಲಿ ಮಗುವಿನ ಶವ ಬಿಸಾಕಿರುವ ಶಂಕೆ ವ್ಯಕ್ತವಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನವಜಾತ ಶಿಶುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು.

ಮುಳ್ಳಿನ ಪೊದೆಯಲ್ಲಿ ಹೆಣ್ಣು ಶಿಶು ಪತ್ತೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೂರಮಟ್ಟಿ ಗ್ರಾಮದ ಹೊರವಲಯದ ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶುವಿನ ಶವವೊಂದು ಪತ್ತೆಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ ವರ್ಗ ಪರಿಶೀಲನೆ ನಡೆಸಿತ್ತು. ಇದಲ್ಲದೇ ಹೊನ್ನಾಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ :ದಾವಣಗೆರೆ: ಮುಳ್ಳಿನ ಕಂಟಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ABOUT THE AUTHOR

...view details