ಕೊಪ್ಪಳ: ಮೇ 25ರಂದು ನಡೆಯಲಿರುವ ಪವಿತ್ರ ರಂಜಾನ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆ ಅಧಿಕಾರಿಗಳು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಶಾಂತಿಸಭೆ ನಡೆಸಿದರು.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ಕನೇ ಹಂತದ ಲಾಕ್ಡೌನ್ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಆಚರಣೆ ಮಾಡಬೇಕು. ಈದ್ಗಾ ಮೈದಾನ, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಸೂಚಿಸಿದರು.
ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ: ಕೊಪ್ಪಳ ಪೊಲೀಸರ ಸ್ಪಷ್ಟನೆ ಈ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಸಮುದಾಯದ ಮುಖಂಡರು, ರಂಜಾನ್ ನಮ್ಮ ಸಮುದಾಯದ ದೊಡ್ಡ ಹಬ್ಬ. ಹೀಗಾಗಿ ನಾವು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆ ಮಾಡುತ್ತೇವೆ. ಅಂದು ಒಂದಿಷ್ಟು ಕಾಲ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಆದರೆ ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು. ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಮನವರಿಕೆ ಮಾಡಿದರು.