ಕರ್ನಾಟಕ

karnataka

ETV Bharat / state

ಕೊಟ್ಟೂರು ಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ! - ಜಾಮೀನು ರಹಿತ ವಾರೆಂಟ್

ಕೊಲೆ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧ ಗಂಗಾವತಿ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಶ್ರೀಗಳು ಸತತವಾಗಿ ಗೈರಾದ ಹಿನ್ನೆಲೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.

ಕೊಟ್ಟೂರು ಶ್ರೀ

By

Published : Jun 30, 2019, 2:02 PM IST

ಕೊಪ್ಪಳ:ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಗಂಗಾವತಿಯ ಕಲ್ಮಠದ ಡಾ. ಕೊಟ್ಟೂರು ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.

ನ್ಯಾಯಾಲಯಕ್ಕೆ ವಿಚಾರಣೆಗೆ ಸತತವಾಗಿ ಹಾಜರಾಗದ ಹಿನ್ನೆಲೆಯಲ್ಲಿ ಜೆಎಂಎಫ್​ಸಿ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ.

ಕಳೆದ 2017 ರಲ್ಲಿ ಕೊಟ್ಟೂರ ಶ್ರೀಗಳ ಮಾಜಿ ಕಾರು ಚಾಲಕ ಮಲ್ಲಯ್ಯ ಶ್ರೀಗಳ ವಿರುದ್ಧ ದೂರು ನೀಡಿದ್ದರು. ಕೊಲೆ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧ ಗಂಗಾವತಿ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಶ್ರೀಗಳು ಸತತವಾಗಿ ಗೈರಾದ ಹಿನ್ನೆಲೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details