ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಸದಸ್ಯನ ಮೇಲೆ ಶಿಸ್ತುಕ್ರಮ: ಉಸ್ಮಾನ್ ಬಿಚ್ಚುಗತ್ತಿ - Gangavathi

ಜೆಡಿಎಸ್ ಸದಸ್ಯ ಜಬ್ಬಾರ್ ಬಿಚ್ಚುಗತ್ತಿ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಈ ಹಿನ್ನೆಲೆ ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್​ ನಗರ ಘಟಕದ ಅಧ್ಯಕ್ಷ ಉಸ್ಮಾನ್ ಹೇಳಿದರು.

UsmanBicchugatthi
ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಸದಸ್ಯನ ಮೇಲೆ ಶಿಸ್ತುಕ್ರಮ: ಉಸ್ಮಾನ್ ಬಿಚ್ಚುಗತ್ತಿ

By

Published : Nov 3, 2020, 6:55 AM IST

ಗಂಗಾವತಿ:ಪಕ್ಷದ ಮುಖಂಡರ ನಿರ್ಧಾರ ಹಾಗೂ ವಿಪ್ ಉಲ್ಲಂಘಿಸಿ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮತ ಚಲಾಯಿಸಿರುವ ಜೆಡಿಎಸ್ ಸದಸ್ಯ ಜಬ್ಬಾರ್ ಬಿಚ್ಚುಗತ್ತಿಗೆ ನೋಟಿಸ್ ನೀಡಲಾಗುವುದು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಉಸ್ಮಾನ್ ಬಿಚ್ಚುಗತ್ತಿ ಹೇಳಿದರು.

ಕಾಂಗ್ರೆಸ್ ಬೆಂಬಲಿಸಿದ ಜೆಡಿಎಸ್ ಸದಸ್ಯನ ವಿರುದ್ಧ ಶಿಸ್ತುಕ್ರಮ: ಉಸ್ಮಾನ್ ಬಿಚ್ಚುಗತ್ತಿ

ಗಂಗಾವತಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಸ್ಮಾನ್, ನಗರಸಭೆಗೆ ನಡೆದ ಚುನಾವಣೆಯಲ್ಲಿ ನಾನು ಮತ್ತು ನನ್ನ ಸಹೋದರ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದೆವು. ಮೂಲತಃ ನಾವು ಕಾಂಗ್ರೆಸ್ಸಿಗರು ಮತ್ತು ಇಕ್ಬಾಲ್ ಅನ್ಸಾರಿ ಬೆಂಬಲಿಗರೇ ಆಗಿದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್​​ನಿಂದ ಚುನಾವಣೆಗೆ ಇಳಿದು ಸ್ಪರ್ಧಿಸಿ ಗೆದ್ದಿದ್ದೇವೆ. ಈಗ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಪಕ್ಷ ನಿರ್ಧಾರ ಕೈಗೊಂಡಿತ್ತು.

ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಕೈಗೊಂಡಿದ್ದಾರೆ. ಈ ಹಿನ್ನೆಲೆ ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ಮಾನ್ ಹೇಳಿದರು.

ABOUT THE AUTHOR

...view details