ಕೊಪ್ಪಳ:ತಾಲೂಕಿನ ಕೆರೆಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆಸಲಾಗುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಗಣಿ ಮತ್ತು ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರಿ ಜಂಟಿ ದಾಳಿ ನಡೆಸಿದ್ದಾರೆ.
ಅರಣ್ಯದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ - illegal stone mining
ಅರಣ್ಯ ಪ್ರದೇಶಗಳಲ್ಲಿ ನಡೆಸಲಾಗುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಗಣಿ ಮತ್ತು ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ
ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿಸಿದ್ದ ಒಂದು ಹಿಟಾಚಿ ಯಂತ್ರ ಸೇರಿದಂತೆ ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ರೂಪಾ ಹಾಗೂ ಸೈಯದ್ ಫಜೀಲ್ಲಾ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು. ಅರಣ್ಯ ಕಾಯ್ದೆ ಉಲ್ಲಂಘನೆ ಅಡಿ ಕೇಸ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.