ಕುಷ್ಟಗಿ: ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಎಲ್ಲರೂ ಹಾಕಿಸಿಕೊಳ್ಳಬೇಕು ಎಂಬ ಉದ್ದೇಶದ ಹಿನ್ನೆಲೆ ತಹಶೀಲ್ದಾರ್ ಎಂ.ಸಿದ್ದೇಶ, ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಗೋಟೂರು, ಮುಖ್ಯಾಧಿಕಾರಿ ಉಮೇಶ ಹಿರೇಮಠ ಹಾಗೂ ಪಿಎಸೈ ತಿಮ್ಮಣ್ಣ ನಾಯಕ್ ಕಾರ್ಯಚರಣೆ ನಡೆಸಿ ಜಾಗೃತಿ ಮೂಡಿಸುವುದರ ಜೊತೆಗೆ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಲಸಿಕೆ ಹಾಕಿಸಿಕೊಳ್ಳದೇ ಇದ್ದರೆ ಅಂಗಡಿ ಬಂದ್ ಮಾಡಿ... ಅಧಿಕಾರಿಗಳಿಂದ ಕಾರ್ಯಾಚರಣೆ - kustagi news
ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿರುವ ಅಂಗಡಿಗಳಿಗೆ ತಾಲೂಕು ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ವಿಚಾರಣೆ ನಡೆಸಿದರು.
ಅಧಿಕಾರಿಗಳಿಂದ ಕಾರ್ಯಾಚರಣೆ
ಕುಷ್ಟಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿರುವ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ, ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ವಿಚಾರಣೆ ನಡೆಸಿದರು. ಈ ವೇಳೆ ಲಸಿಕೆ ಹಾಕಿಸಿಕೊಳ್ಳದ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ಅವರು, ಅಂಗಡಿ ಬಂದ್ ಮಾಡಿಸಿ ಲಸಿಕೆ ಹಾಕಿದ ನಂತರ ಅಂಗಡಿಗಳನ್ನು ತೆರೆಯಬೇಕು ಎಂದು ತಾಕೀತು ಮಾಡಿದರು.
ಈ ಕಾರ್ಯಾಚರಣೆಯಲ್ಲಿ 10ಕ್ಕೂ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು.