ಕೊಪ್ಪಳ:ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಮೃತರ ಸಂಖ್ಯೆ 5ಕ್ಕೆ ಏರಿದೆ.
ಕೊರೊನಾಗೆ ಮತ್ತೊಬ್ಬ ಬಲಿ... ಕೊಪ್ಪಳದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆ - Koppala latest news
ನಿನ್ನೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿರೋದು ಜನರಲ್ಲಿ ಆತಂಕ ಹೆಚ್ಚಿಸಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
Koppala corona case
ಕೊಪ್ಪಳದ ಭಾಗ್ಯನಗರ ಪಟ್ಟಣದ 42 ವರ್ಷದ ವ್ಯಕ್ತಿ ಇಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿಗೆ ಸೋಂಕು ದೃಢವಾದ ಹಿನ್ನೆಲೆ ನಿನ್ನೆ ಮಧ್ಯಾಹ್ನ ಕೊಪ್ಪಳದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ನಿನ್ನೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿರೋದು ಜನರಲ್ಲಿ ಆತಂಕ ಹೆಚ್ಚಿಸಿದೆ.