ಕೊಪ್ಪಳ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ - Koppal covid death cases
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಒಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

Koppal
ಕೊಪ್ಪಳ ನಗರದ ಒಂದನೇ ವಾರ್ಡ್ನ ಸಿರಸಪ್ಪಯ್ಯಮಠ ಪ್ರದೇಶದ 40 ವರ್ಷದ ಪುರುಷ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತ ಸಾವನ್ನಪ್ಪಿದ್ದಾನೆ. ಸರ್ಕಾರದ ನಿಯಮಗಳ ಪ್ರಕಾರ ಮೃತನ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.