ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆ 10 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಬಲಿಯಾಗಿದ್ದಾನೆ. ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 88 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕೊಪ್ಪಳದಲ್ಲಿಂದು ಕೊರೊನಾಗೆ ಓರ್ವ ಬಲಿ... ಮತ್ತೆ 10 ಜನರಿಗೆ ತಗುಲಿದ ಸೋಂಕು - Corona Latest News
ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟರೆ, ಮತ್ತೆ 10 ಹೊಸ ಪ್ರಕರಣ ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ.

ಕೊಪ್ಪಳದಲ್ಲಿಂದು ಕೊರೊನಾ ಮಾರಿಗೆ ಓರ್ವ ಬಲಿ...ಮತ್ತೆ 10 ಜನರಿಗೆ ಸೋಂಕು
ಇನ್ನುಳಿದಂತೆ 73 ಸಕ್ರಿಯ ಪ್ರಕರಣಗಳಿಗೆ ಕೊಪ್ಪಳದ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ತೀವ್ರ ಉಸಿರಾಟದ ತೊಂದರೆ, ಐಎಲ್ಐ, ಪ್ರಾಥಮಿಕ, ದ್ವಿತೀಯ ಸಂಪರ್ಕಿತರು ಹಾಗೂ ಇತರೆ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 13,962 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.
ಈ ಪೈಕಿ 11,525 ಜನರ ವರದಿ ಬಂದಿದ್ದು, ಇನ್ನೂ 2,438 ಜನರ ಲ್ಯಾಬ್ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.