ಕರ್ನಾಟಕ

karnataka

ETV Bharat / state

ಗಂಗಾವತಿಯಲ್ಲಿ ನರ್ಸ್​ಗೆ ಸೋಂಕು: ಸರ್ಕಾರಿ ಆಸ್ಪತ್ರೆಯ ಸೀಲ್​ಡೌನ್​ಗೆ ಚಿಂತನೆ - gangavati corona news

ಗಂಗಾವತಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ನರ್ಸ್​ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯ ಸಿಬ್ಬಂದಿ ಆತಂಕದಲ್ಲಿದ್ದಾರೆ.

corona possitive cases in gangavati
ನರ್ಸ್​ಗೆ ಕೊರೊನಾ ಸೋಂಕು

By

Published : Jun 16, 2020, 12:42 PM IST

ಗಂಗಾವತಿ:ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್​ ಒಬ್ಬರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ಸೀಲ್​ಡೌನ್​ ಮಾಡುವ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ.

ನರ್ಸ್​ಗೆ ಹೆರಿಗೆ ಆಗಿ ಕೇವಲ ಆರು ತಿಂಗಳು ಕಳೆದಿದ್ದು, ಅವರು ಇತ್ತೀಚೆಗಷ್ಟೆ ಕರ್ತವ್ಯಕ್ಕೆ ಹಾಜರಾಗಿದ್ದರು. ಹೆರಿಗೆ ಕೋಣೆಯಲ್ಲಿ ಸೋಮವಾರದವರೆಗೂ ಕರ್ತವ್ಯ ನಿರ್ವಹಿಸಿದ್ದಾರೆ ಎನ್ನಲಾಗ್ತಿದೆ. ಇದೀಗ ಈ ಪ್ರಕರಣ ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ನರ್ಸ್​ಗೆ ಕೊರೊನಾ ಸೋಂಕು

ನರ್ಸ್ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಪತ್ತೆ ಕಾರ್ಯ ನಡೆದಿದೆ. ಆಸ್ಪತ್ರೆಗೆ ನಿತ್ಯ ಸಾವಿರಾರು ಜನರು ಬಂದು ಹೋಗುತ್ತಾರೆ. ಹೀಗಾಗಿ ಆಸ್ಪತ್ರೆಯನ್ನು ಸೀಲ್​ಡೌನ್​ ಮಾಡಿದರೆ ರೋಗಿಗಳಿಗೆ ಸಮಸ್ಯೆಯಾಗಲಿದೆ ಎಂಬ ಆತಂಕವೂ ಇದೆ.

ಈ ಪ್ರಕರಣದಿಂದಾಗಿ ಇಡೀ ಆಸ್ಪತ್ರೆಯ ಸಿಬ್ಬಂದಿ ಆತಂಕದಲ್ಲಿದ್ದು, ಜಿಲ್ಲಾಡಳಿತ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಆಸ್ಪತ್ರೆಯ ಸೀಲ್​​ಡೌನ್ ಪ್ರಕ್ರಿಯೆ​ ನಿಂತಿದೆ.

ABOUT THE AUTHOR

...view details