ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಇಂದು ಒಂದು ಕೇಸ್​ ಪತ್ತೆ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆ

ಕೊಪ್ಪಳದಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್​ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 22ಕ್ಕೆ ಏರಿದೆ. ಈ ಪೈಕಿ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Koppal
ಕೊಪ್ಪಳ

By

Published : Jun 17, 2020, 7:33 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 22 ಕ್ಕೆ ಏರಿದಂತಾಗಿದೆ.

ಜಿಲ್ಲೆಯ ಕುಕನೂರು ಪಟ್ಟಣದ 30 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಈ ವ್ಯಕ್ತಿಗೆ ಟ್ರಾವೆಲ್ ಹಿಸ್ಟರಿ ಇದ್ದು, ರಾಜಸ್ಥಾನದಿಂದ ಜೂನ್ 10 ರಂದು ಕುಕನೂರಿಗೆ ಬಂದಿದ್ದಾನೆ. ಸೋಂಕಿನ ಲಕ್ಷಣಗಳು ಕಂಡು ಬಂದ‌ ಹಿನ್ನೆಲೆಯಲ್ಲಿ ತಪಾಸಣೆಗೊಳಪಡಿಸಿದಾಗ ಕೊರೊನಾ ದೃಢಪಟ್ಟಿದೆ.

ಕೊರೊನಾ ಸೋಂಕಿತರ ಪ್ರಕರಣದ ಪ್ರತಿ

ಸೋಂಕಿತನನ್ನು ಈಗಾಗಲೇ ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸೋಂಕಿತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 22 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 11 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 11 ಜನ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.‌

ಜಿಲ್ಲೆಯಲ್ಲಿ ಈವರೆಗೆ ಒಟ್ಟು 6809 ಜನರ ಮಾದರಿ ಸಂಗ್ರಹಿಸಿ ಲ್ಯಾಬ್​ಗೆ ಕಳಿಸಲಾಗಿದೆ. ಈ ಪೈಕಿ 6336 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 451 ಜನರ ಲ್ಯಾಬ್ ರಿಪೋರ್ಟ್ ಬರಬೇಕಿದೆ ಎಂದು‌ ಜಿಲ್ಲಾಡಳಿತ ಮಾಹಿತಿ‌ ನೀಡಿದೆ.

ABOUT THE AUTHOR

...view details