ಕೊಪ್ಪಳ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೊಪ್ಪಳದಲ್ಲಿ ಮತ್ತೋರ್ವ ಸೋಂಕಿತ ಗುಣಮುಖ...15 ಮಂದಿಗೆ ಚಿಕಿತ್ಸೆ ಮುಂದುವರಿಕೆ - ಕೊಪ್ಪಳ ಕೊರೊನಾ ನ್ಯೂಸ್
ನಗರದ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-5838 ಗುಣಮುಖರಾಗಿ ಮನೆ ಸೇರಿದ್ದಾರೆ. ಉಳಿದ 28 ಸೋಂಕಿತರ ಪೈಕಿ, 12 ಜನರು ಗುಣಮುಖರಾಗಿದ್ದು, ಉಳಿದ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Koppala corona case
ನಗರದ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-5838 ಗುಣಮುಖರಾಗಿದ್ದಾರೆ. ಚಿಕಿತ್ಸೆ ಬಳಿಕ, ಗಂಟಲು ದ್ರವ ಪರೀಕ್ಷೆ ಮಾಡಿದಾಗ ನೆಗಟಿವ್ ವರದಿ ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಬಿ. ದಾನರಡ್ಡಿ ಅವರು ತಿಳಿಸಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 28 ಸೋಂಕಿತರ ಪೈಕಿ, 12 ಜನರು ಗುಣಮುಖರಾಗಿದ್ದು, ಓರ್ವ ಮಹಿಳೆ ಸಾವಿಗೀಡಾಗಿದ್ದಾಳೆ. ಸದ್ಯ 15 ಸಕ್ರಿಯ ಪ್ರಕರಣಗಳಿದ್ದು, ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.