ಕೊಪ್ಪಳ:ಬೆಂಗಳೂರಿನಲ್ಲಿದ್ದು ತಿಂಗಳಿಗೊಮ್ಮೆ ಬಂದು ಹೋಗುವ ಸಚಿವರು ನಮ್ಮ ಜಿಲ್ಲೆಗೆ ಬೇಡ. ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಕುಷ್ಟಗಿ ಕ್ಷೇತ್ರದ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅವರ ಪಕ್ಷದ ಮೂವರು ಶಾಸಕರು ಇದ್ದಾರೆ. ಆ ಮೂವರಲ್ಲಿ ಯಾರನ್ನಾದರೂ ಸಚಿವರನ್ನಾಗಿ ಮಾಡಲಿ. ಜಿಲ್ಲೆಯ ಅಭಿವೃದ್ಧಿಗಾಗಿ ಸಚಿವರು ಬೇಕು. ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದರು.