ಗಂಗಾವತಿ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಸೋಂಕು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಎಂದು ಶಾಸಕ ಪರಣ್ಣ ಮುನವಳ್ಳಿ ಅಧಿಕಾರಿಗಳ ಬಳಿ ಕೋರಿದರು.
ಹೆಚ್ಚುತ್ತಿರುವ ಕೊರೊನಾ ಪ್ರಕರಣ.. ಅಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕ ಮುನವಳ್ಳಿ
ತಮ್ಮ ಕಚೇರಿಯಲ್ಲಿ ನಾನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕರು, ಈವರೆಗೂ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ಆಗಿತ್ತು. ಆದರೀಗ ಜಿಲ್ಲೆಯಲ್ಲಿ ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣ ಕಂಡು ಬರುತ್ತಿವೆ.
Meeting
ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ನಾನಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕರು, ಈವರೆಗೂ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ಆಗಿತ್ತು. ಆದರೀಗ ಜಿಲ್ಲೆಯಲ್ಲಿ ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣ ಕಂಡು ಬರುತ್ತಿವೆ.
ಇದಕ್ಕೆ ಸಂಬಂಧಿಸಿದಂತೆ ಅಥವಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಯಾವೆಲ್ಲಾ ಕ್ರಮಕೈಗೊಳ್ಳಬೇಕು ಎಂಬ ಮಾಹಿತಿ ನೀಡಿ ಎಂದರು. ಮುಖ್ಯವಾಗಿ ಜಿಲ್ಲೆಯಲ್ಲಿ ಕಂಡು ಬರುತ್ತಿರುವ ಪ್ರಕರಣಗಳ ಪೈಕಿ ಗಂಗಾವತಿ ತಾಲೂಕಿನವೇ ಹೆಚ್ಚಿನ ಪ್ರಮಾಣದಲ್ಲಿವೆ ಎಂದು ಆತಂಕ ವ್ಯಕ್ತಪಡಿಸಿದರು.