ಕರ್ನಾಟಕ

karnataka

ಎಸ್​ಎಸ್​ಎಲ್​​ಸಿ ಪರೀಕ್ಷೆ : ಬಸ್​​ನಲ್ಲಿ ಮಕ್ಕಳನ್ನು ಕಳುಹಿಸಲು ಪಾಲಕರ ಹಿಂದೇಟು

ಸರಿಯಾದ ಸಮಯಕ್ಕೆ ಪರೀಕ್ಷಾ‌ ಕೇಂದ್ರಗಳಿಗೆ ತೆರಳಲು ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಬಸ್ ಮೂಲಕ ತೆರಳಲು ವಿದ್ಯಾರ್ಥಿಗಳು ಬರುತ್ತಿಲ್ಲ. ಪಾಲಕರೂ ಸಹ ಮಕ್ಕಳನ್ನು ಬಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

By

Published : Jun 25, 2020, 9:08 AM IST

Published : Jun 25, 2020, 9:08 AM IST

Updated : Jun 25, 2020, 11:33 AM IST

ಪರೀಕ್ಷೆ ಬರೆಯಲು ಬಸ್​​ನಲ್ಲಿ ಮಕ್ಕಳನ್ನು ಕಳಿಸಲು ಪಾಲಕರ ಹಿಂದೇಟು
ಪರೀಕ್ಷೆ ಬರೆಯಲು ಬಸ್​​ನಲ್ಲಿ ಮಕ್ಕಳನ್ನು ಕಳಿಸಲು ಪಾಲಕರ ಹಿಂದೇಟು

ಕೊಪ್ಪಳ: ಕೊರೊನಾ ಭೀತಿಯ ನಡುವೆ ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್​​ಸಿ ಪರೀಕ್ಷೆ ಶುರುವಾಗುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಸ್ ಮೂಲಕ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಬಸ್​​ನಲ್ಲಿ ಮಕ್ಕಳನ್ನು ಕಳುಹಿಸಲು ಪಾಲಕರ ಹಿಂದೇಟು

ಸರಿಯಾದ ಸಮಯಕ್ಕೆ ಪರೀಕ್ಷಾ‌ ಕೇಂದ್ರಗಳಿಗೆ ತೆರಳಲು ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಬಸ್ ಮೂಲಕ ತೆರಳಲು ವಿದ್ಯಾರ್ಥಿಗಳು ಬರುತ್ತಿಲ್ಲ. ಪಾಲಕರು ಸಹ ಮಕ್ಕಳನ್ನು ಬಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ತಮ್ಮ ದ್ವಿಚಕ್ರ ವಾಹನಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ನಿಗದಿತ ಸಮಯಕ್ಕೆ ತೆರಳದೆ ಬಸ್ ಗಳು ಖಾಲಿ ಖಾಲಿಯಾಗಿ ನಿಂತು ಕೊಂಡಿವೆ.

Last Updated : Jun 25, 2020, 11:33 AM IST

ABOUT THE AUTHOR

...view details