ಕರ್ನಾಟಕ

karnataka

ETV Bharat / state

ಕೋವಿಡ್​​ ನಿಯಮ ಪಾಲಿಸದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ಕೊಪ್ಪಳದ ಜೆ.ಪಿ. ಮಾರ್ಕೆಟ್​​ನಲ್ಲಿ ನೂರಾರು ಜನರು ಮಾಸ್ಕ್​ ಹಾಕದೆ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದು ಕಂಡುಬಂತು.

Koppal
ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

By

Published : Apr 30, 2021, 12:16 PM IST

ಕೊಪ್ಪಳ:ಇಂದು ಕೂಡ ನಗರದ ಜೆ.ಪಿ. ಮಾರುಕಟ್ಟೆ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಕೋವಿಡ್​ ನಿಯಮ ಗಾಳಿಗೆ ತೂರಿರುವ ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.

ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಉಲ್ಲಂಘಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಜನರು ಮಾರುಕಟ್ಟೆಗಳಲ್ಲಿ ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ.

10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು.

ಇದನ್ನೂ ಓದಿ:ರಾಮನಗರ ನಗರಸಭೆ ಚುನಾವಣೆ: ಭಾರೀ ಮತಗಳಿಂದ ಗೆದ್ದ ಕೋವಿಡ್​ಗೆ ಬಲಿಯಾದ ಅಭ್ಯರ್ಥಿ!

ABOUT THE AUTHOR

...view details