ಕೊಪ್ಪಳ: ಕೊರೊನಾ ಸೋಂಕು ಹರಡದಂತೆ ತಡೆಯಲು ಜನರು ಮನೆಯಲ್ಲಿಯೇ ಇರಬೇಕು ಎಂದು ಕ್ಷೇತ್ರದ ಜನರಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದ್ದಾರೆ.
ಸೋಂಕು ಹರಡದಂತೆ ತಡೆಯಲು ಜನರು ಮನೆಯಲ್ಲೇ ಇರಿ: ರಾಘವೇಂದ್ರ ಹಿಟ್ನಾಳ್ - ಕೊರೊನಾ ಸೋಂಕು
ಕೊರೊನಾ ಭೀತಿ ಇಡೀ ವಿಶ್ವವನ್ನೇ ಆವರಿಸಿದೆ. ಈ ರೋಗ ಹರಡದಂತೆ ತಡೆಯಲು ಜನರು ಮನೆಯಲ್ಲಿಯೇ ಇರಬೇಕು ಎಂದು ಕ್ಷೇತ್ರದ ಜನರಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದ್ದಾರೆ.
ಕೊರೊನಾ ಭೀತಿ ಇಡೀ ವಿಶ್ವವನ್ನೇ ಆವರಿಸಿದೆ. ಈ ರೋಗ ಹರಡದಂತೆ ತಡೆಯಲು ಜನರು ಮನೆಯಲ್ಲಿಯೇ ಇರಬೇಕು. ಈಗಾಗಲೇ ಪ್ರಧಾನ ಮಂತ್ರಿಗಳು 3 ವಾರಗಳ ಕಾಲ ದೇಶವನ್ನು ಲಾಕ್ ಡೌನ್ ಮಾಡಿದ್ದಾರೆ. ಹೀಗಾಗಿ, ಜನರು ಸಹಕರಿಸಿ ಮನೆಯಲ್ಲಿಯೇ ಇರಬೇಕು. ನಗರದಲ್ಲಿ ಪ್ರತಿ ವಾರ್ಡ್‌ನಲ್ಲಿ ಕೆಮಿಕಲ್ ಸ್ಪ್ರೇ ಮಾಡಲು ಸೂಚಿಸಲಾಗಿದೆ. ಅಲ್ಲದೆ ಮಾಸ್ಕ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಕಂಟ್ರೋಲ್ ಮಾಡಲು ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಅಧಿಕಾರಿ ಸಿಬ್ಬಂದಿಗಳು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಹಾಗೂ ವೈದ್ಯರ ಸೂಚನೆಗಳನ್ನು ನಾವೆಲ್ಲರೂ ಪಾಲಿಸೋಣ. ಎಲ್ಲರೂ ಮನೆಯಲ್ಲಿ ಇರೋಣ ಎಂದು ಶಾಸಕರು ಜನರಿಗೆ ಮನವಿ ಮಾಡಿದ್ದಾರೆ.