ಕುಷ್ಟಗಿ (ಕೊಪ್ಪಳ): ಕುಷ್ಟಗಿ-ಗಜೇಂದ್ರಗಡ ರಸ್ತೆಯ ಕೊರಡಕೇರಾ ಬಳಿ ಚಿಕ್ಕನಂದಿಹಾಳ ಕ್ರಾಸ್ ನಲ್ಲಿ ಪೆಟ್ರೋಲಿಂ ಟ್ಯಾಂಕರ್ ಲಾರಿ ಬ್ರೇಕ್ ಫೇಲ್ ಆಗಿದ್ದರಿಂದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ತಡರಾತ್ರಿ ಸಂಭವಿಸಿದೆ.
ವಿದ್ಯುತ್ ಕಂಬಕ್ಕೆ ಪೆಟ್ರೋಲಿಯಂ ಲಾರಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ - Kushtagi Petroleum truck collides news
ಬ್ರೇಕ್ ಫೇಲ್ನಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿವೆ.
ವಿದ್ಯುತ್ ಕಂಬಕ್ಕೆ ಪೆಟ್ರೋಲಿಯಂ ಲಾರಿ ಡಿಕ್ಕಿ ತಪ್ಪಿದ ಭಾರಿ ಅನಾಹುತ
ಬ್ರೇಕ್ ಫೇಲ್ನಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದು ವಿದ್ಯುತ್ ತಂತಿ ತುಂಡಾಗಿವೆ. ಆದರೆ ಸ್ಥಳದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.
ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ವಿದ್ಯುತ್ ಕಂಬಗಳು ಮುರಿದುಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.