ಗಂಗಾವತಿ:ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಮುಖಂಡ ಅಬ್ದುಲ್ ಫೈಯಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಈದ್ಗಾ ಕಾಲೋನಿಯ ಫೈಯಾಜ್ ಮನೆ ಮೇಲೆ ಇಂದು ಮೇಲೆ ಬೆಳಗಿನಜಾವ ಅಧಿಕಾರಿಗಳು ದಾಳಿ ನಡೆಸಿದ್ದರು.
ಅಬ್ದುಲ್ ಫೈಯಾಜ್ನನ್ನು ವಿಚಾರಣೆಗಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಪ್ರಾಥಮಿಕ ವಿಚಾರಣೆಯ ಬಳಿಕ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.