ಕರ್ನಾಟಕ

karnataka

ETV Bharat / state

ಬ್ಯಾಂಕ್ ಕಳ್ಳತನ ಪ್ರಕರಣ.. ಆರೋಪಿಗಳನ್ನು ಬಂಧಿಸಿದ ಪೊಲೀಸರು - Koppal bank robbery case

ಕಳೆದ ಸೆ.24ರಂದು ಬೇವೂರು ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನ ಮಾಡಿ ಸುಮಾರು 3 ಕೆಜಿ 761 ಗ್ರಾಂ ಚಿನ್ನದ ಆಭರಣಗಳು, 21.75 ಲಕ್ಷ ರೂ. ನಗದು ದೋಚಿ ಆರೋಪಿಗಳು ಪರಾರಿಯಾಗಿದ್ದರು..

Koppal
Koppal

By

Published : Oct 7, 2020, 9:08 PM IST

ಕೊಪ್ಪಳ :ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ. ಆರೋಪಿಗಳನ್ನು ಇಂದು ಬೇವೂರು ಗ್ರಾಮಕ್ಕೆ ಕರೆತಂದು ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ.

ಕಳೆದ ಸೆ.24ರಂದು ಬೇವೂರು ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕಳ್ಳತನ ಮಾಡಿ ಸುಮಾರು 3 ಕೆಜಿ 761 ಗ್ರಾಂ ಚಿನ್ನದ ಆಭರಣಗಳು, 21.75 ಲಕ್ಷ ರೂ. ನಗದು ದೋಚಿ ಆರೋಪಿಗಳು ಪರಾರಿಯಾಗಿದ್ದರು.

ಪ್ರಕರಣ ಕುರಿತಂತೆ ಬೇವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಈಗ ಆ ತಂಡಗಳು ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದಾರೆ.

ABOUT THE AUTHOR

...view details