ಕೊಪ್ಪಳ: ವ್ಯಕ್ತಿಯನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಜಿಲ್ಲೆಯ ಹನುಮಸಾಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವ್ಯಕ್ತಿ ಅಪಹರಿಸಿ ಹಣಕ್ಕೆ ಬೇಡಿಕೆ: 24 ಗಂಟೆಯೊಳಗೆ ಆರೋಪಿಗಳು ಅಂದರ್ - man kidnaping in koppala news
ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಹನುಮಸಾಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
![ವ್ಯಕ್ತಿ ಅಪಹರಿಸಿ ಹಣಕ್ಕೆ ಬೇಡಿಕೆ: 24 ಗಂಟೆಯೊಳಗೆ ಆರೋಪಿಗಳು ಅಂದರ್ arrest](https://etvbharatimages.akamaized.net/etvbharat/prod-images/768-512-5269998-thumbnail-3x2-surya.jpg)
ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಪರಸಪ್ಪ ಕೊತಬಾಳ ಎಂಬ ವ್ಯಕ್ತಿಯನ್ನು ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯ ನಾಗೇಶ್ವರರಾವ್ ನೆಕ್ಕಂಟಿ, ಹಾಗೂ ಕಲಬುರ್ಗಿ ಮೂಲದ ರಾಘವೇಂದ್ರ ಹೂಗಾರ ಎಂಬಿಬ್ಬರು ಆರೋಪಿಗಳು ಅಪಹರಿಸಿದ್ದರು. ಅಪಹರಣಕ್ಕೊಳಗಾದ ಪರಸಪ್ಪ ಅವರ ಮಗನಿಗೆ ಆರೋಪಿಗಳು ಫೋನ್ ಮಾಡಿ ಒಂದು ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಪರಸಪ್ಪ ಅವರ ಮಗ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕುಷ್ಟಗಿ ಸಿಪಿಐ ಚಂದ್ರಶೇಖರ್, ಹನುಮಸಾಗರ ಠಾಣೆಯ ಪಿಎಸ್ಐ ಅಮರೇಶ ಹುಬ್ಬಳ್ಳಿ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು 24 ಗಂಟೆಗಳಲ್ಲಿ ಜಿಲ್ಲೆಯ ಕಾರಟಗಿ ಬಳಿ ಬಂಧಿಸಿದ್ದಾರೆ. ಅಲ್ಲದೆ ಅಪಹರಣಕ್ಕೊಳಗಾಗಿದ್ದ ಪರಸಪ್ಪರನ್ನು ರಕ್ಷಿಸಿದ್ದಾರೆ. ಬಂಧಿತರಿಂದ ಇಂಡಿಕಾ ಕಾರ್, ಕಬ್ಬಿಣದ ಪೈಪ್, ಕಬ್ಬಿಣದ ಚೈನ್, ಹಗ್ಗ, ಎರಡು ಮೊಬೈಲ್, ವಶಪಡಿಸಿಕೊಂಡಿದ್ದಾರೆ.