ಕರ್ನಾಟಕ

karnataka

ETV Bharat / state

ಪಾಲಕರ ಒಪ್ಪಿಗೆ ಪಡೆದು ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಬಹುದು - Preparation by the Department of Education

9 ಮತ್ತು 10ನೇ ತರಗತಿಯ ಮಕ್ಕಳು ಶಾಲೆಗೆ ಬಂದು ಶಿಕ್ಷಕರನ್ನು ಭೇಟಿ ಮಾಡಿಕೊಂಡು ಹೋಗಬಹುದು. ಆದರೆ, ಈ ಬಗ್ಗೆ ಮಕ್ಕಳ ಪಾಲಕರು ಕಡ್ಡಾಯವಾಗಿ ಒಪ್ಪಿಗೆ ಪತ್ರ ನೀಡಬೇಕು. ಇಂದಿನಿಂದ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಆರಂಭವಾಗಿವೆ. ಈ ಸಂದರ್ಭದಲ್ಲಿ ಮಕ್ಕಳು ಬರುವುದಿಲ್ಲ..

Preparation of Department of Education
ತರಗತಿಗಳು ಪ್ರಾರಂಭ

By

Published : Sep 21, 2020, 4:18 PM IST

ಕೊಪ್ಪಳ :ಕೊರೊನಾ ಹಿನ್ನೆಲೆ ಸದ್ಯಕ್ಕೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಆದರೆ, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಬಂದು ಶಿಕ್ಷಕರನ್ನು ಭೇಟಿ ಮಾಡಿ ಅಭ್ಯಾಸಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದುಕೊಂಡು ಹೋಗಬಹುದು ಎಂಬ ಶಿಕ್ಷಣ ಸಚಿವ ಎಸ್‌ ಸುರೇಶ್‌ಕುಮಾರ್ ಅವರ ಸೂಚನೆಯಂತೆ ಜಿಲ್ಲೆಯಲ್ಲಿ ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಸೋಂಕು ಹರಡುತ್ತಿರುವುದರಿಂದ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ಪಾಲಕರ ಒತ್ತಾಯಕ್ಕೆ ಮಣಿದ ಶಿಕ್ಷಣ ಸಚಿವರು, ತರಗತಿಗಳು ಪ್ರಾರಂಭವಾಗುವುದಿಲ್ಲ. ಆದರೆ, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಬಂದು ಶಿಕ್ಷಕರನ್ನು ಭೇಟಿ ಮಾಡಿ ಅಭ್ಯಾಸಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದಿದ್ದರು. ಹಾಗಾಗಿ, ಶಿಕ್ಷಣ ಸಚಿವರ ಅಣತಿಯಂತೆ ಜಿಲ್ಲೆಯಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ

9 ಮತ್ತು 10ನೇ ತರಗತಿಯ ಮಕ್ಕಳು ಶಾಲೆಗೆ ಬಂದು ಶಿಕ್ಷಕರನ್ನು ಭೇಟಿ ಮಾಡಿಕೊಂಡು ಹೋಗಬಹುದು. ಆದರೆ, ಈ ಬಗ್ಗೆ ಮಕ್ಕಳ ಪಾಲಕರು ಕಡ್ಡಾಯವಾಗಿ ಒಪ್ಪಿಗೆ ಪತ್ರ ನೀಡಬೇಕು. ಇಂದಿನಿಂದ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಆರಂಭವಾಗಿವೆ. ಈ ಸಂದರ್ಭದಲ್ಲಿ ಮಕ್ಕಳು ಬರುವುದಿಲ್ಲ.

ಅಲ್ಲದೆ, ಈಗಾಗಲೇ ವಿದ್ಯಾಗಮ ಮೂಲಕ ಮಕ್ಕಳಿಗೆ ಪಾಠ, ಕಿರುಪರೀಕ್ಷೆ ಸೇರಿ ಅಭ್ಯಾಸ ಮಾಡಿಸಲಾಗುತ್ತಿದೆ. ಹೀಗಾಗಿ, ಮಕ್ಕಳು ಶಾಲೆಗೆ ಬಂದೇ ಅಭ್ಯಾಸಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದೇನಿಲ್ಲ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ.

ABOUT THE AUTHOR

...view details