ಕೊಪ್ಪಳ:ನಾಳೆ ನಡೆಯಲಿರುವ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳ 76 ಗ್ರಾಮ ಪಂಚಾಯಿತಿಗಳಿಗೆ ಮತದಾನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ.
ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ. ಜಿಲ್ಲೆಯ ಕುಷ್ಟಗಿ, ಕನಕಗಿರಿ, ಕಾರಟಗಿ ಹಾಗೂ ಗಂಗಾವತಿ ತಾಲೂಕುಗಳಲ್ಲಿ ಒಟ್ಟು 76 ಗ್ರಾಮ ಪಂಚಾಯ್ತಿಗಳ 514 ಕ್ಷೇತ್ರಗಳ 1,375 ಸ್ಥಾನಗಳ ಪೈಕಿ 169 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಉಳಿದ ಸ್ಥಾನಗಳಿಗೆ ಮತದಾನ ನಡೆಯಲಿದ್ದು, 3,095 ಅಭ್ಯರ್ಥಿಗಳು ಚುನಾವಣೆಯ ಅಂತಿಮ ಕಣದಲ್ಲಿದ್ದಾರೆ.