ಕೊಪ್ಪಳ :ಕೊರೊನಾ ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೀಡಾಗಿರುವ ಖಾಸಗಿ ಶಾಲೆಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಎಸ್ಎಫ್ಐ ಸಂಘಟನೆ ನೇತೃತ್ವದಲ್ಲಿ ಖಾಸಗಿ ಶಾಲೆಗಳ ಸಿಬ್ಬಂದಿ ಪ್ರತಿಭಟಿಸಿದರು.
ಖಾಸಗಿ ಶಾಲೆಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಆಗ್ರಹಿಸಿ ಪ್ರತಿಭಟನೆ - Koppala protest news
ಸರ್ಕಾರ ಅನೇಕ ವರ್ಗದ ಜನರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಿದೆ. ಅದರಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೂ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ ನೆರವಿಗೆ ಬರಬೇಕು..
ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ನೆರವಿಗೆ ಬರುವಂತೆ ಒತ್ತಾಯಿಸಿದರು. ಕೊರೊನಾದಿಂದಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ತರಕಾರಿ, ಹಣ್ಣು ಮಾರಾಟ ಮಾಡುವ ಕೆಲಸ ಮತ್ತು ಉದ್ಯೋಗ ಖಾತ್ರಿಯಲ್ಲಿ ದುಡಿದು ಜೀವನ ನಿರ್ವಹಣೆ ಮಾಡುತ್ತಿದ್ದಾರೆ ಎಂದರು.
ಸರ್ಕಾರ ಅನೇಕ ವರ್ಗದ ಜನರಿಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಿದೆ. ಅದರಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೂ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ ನೆರವಿಗೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.