ಕರ್ನಾಟಕ

karnataka

ETV Bharat / state

ಸತೀಶ್​ಗೆ ತಲೆ ಸರಿ ಇಲ್ಲ: ರಮೇಶ್​ ಜಾರಕಿಹೊಳಿ ತಿರುಗೇಟು - Progress review meeting

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

koppal
ಪ್ರಗತಿ ಪರಿಶೀಲನಾ ಸಭೆ

By

Published : Mar 14, 2020, 1:25 PM IST

Updated : Mar 14, 2020, 2:12 PM IST

ಕೊಪ್ಪಳ: ಸತೀಶ್ ಜಾರಕಿಹೊಳಿ ಅವರಿಗೆ ತಲೆ ಸರಿ ಇಲ್ಲ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

ಇತ್ತೀಚಿಗೆ ಜಿಲ್ಲೆಗೆ ಸತೀಶ್ ಜಾರಕಿಹೊಳಿ ಬಂದಿದ್ದಾಗ ರಮೇಶ್ ಜಾರಕಿಹೊಳಿ ಅವರನ್ನ ಬಿಜೆಪಿಯವರು ನಿಯಂತ್ರಣದಲ್ಲಿ ಇಡಬೇಕು ಹೇಳಿದ್ದಾರೆ ಎಂಬ ವಿಷಯದ ಬಗ್ಗೆ ಗಮನ ಸೆಳೆದಾಗ ಗರಂ ಆದ ಸಚಿವ ರಮೇಶ್ ಜಾರಕಿಹೊಳಿ, ಸಹೋದರರ ವಿಷಯ ಯಾಕೆ ಕೇಳ್ತೀರಿ ಎಂದು ಸಿಡಿಮಿಡಿಗೊಂಡರು. ಇನ್ನು ಅವರು ಸಚಿವರಾದ ಬಳಿಕ ಇದೇ‌ ಮೊದಲ ಬಾರಿಗೆ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಜನ ಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ತುಂಗಭದ್ರಾ ಕಾಡಾ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ

ಸಭೆಯಲ್ಲಿ ಸಿಂಗಟಾಲೂರು ಏತ ನೀರಾವರಿ, ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣ‌ ಸೇರಿ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಮೂರೂ ಜಿಲ್ಲೆಗಳ ಜನ ಪ್ರತಿನಿಧಿಗಳು ಸಲಹೆ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಕೊರೊನಾ ವೈರಸ್ ಯಾವುದೇ ಜಾತಿ, ಪಕ್ಷ ನೋಡಿ ಬರುವುದಿಲ್ಲ. ಕೇಂದ್ರ ಸರ್ಕಾರದ ನಿರ್ದೇಶನದ‌ ಮೇರೆಗೆ ರಾಜ್ಯ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

Last Updated : Mar 14, 2020, 2:12 PM IST

ABOUT THE AUTHOR

...view details