ಗಂಗಾವತಿ: ಕನ್ನಡ ಚಿತ್ರರಂಗದ ಸಿನಿ ಕಲಾವಿದರು ಸೇರಿದಂತೆ ನಾನಾ ವಲಯದಲ್ಲಿನ ವ್ಯಕ್ತಿಗಳಿಗೆ ಡ್ರಗ್ಸ್ ನಂಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದರಿಂದ ರಾಜ್ಯದ ಹೆಸರು, ಪ್ರತಿಷ್ಠೆಗೆ ಧಕ್ಕೆಯಾಗಿದೆ. ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.
ಡ್ರಗ್ಸ್ನಿಂದಾಗಿ ರಾಜ್ಯದ ಗೌರವ ಘನತೆಗೆ ಧಕ್ಕೆ: ಕಠಿಣ ಕ್ರಮಕ್ಕೆ ಒತ್ತಾಯ - drug
ಸ್ಯಾಂಡಲ್ವುಡ್ನಲ್ಲಿ ಭುಗಿಲೆದ್ದಿರುವ ಡ್ರಗ್ಸ್ ವಿವಾದದಿಂದ ರಾಜ್ಯದ ಪ್ರತಿಷ್ಠೆಗೆ ಧಕ್ಕೆಯುಂಟಾಗಿದ್ದು, ಕೂಡಲೇ ಈ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಠಿಣ ಕ್ರಮಕ್ಕೆ ಒತ್ತಾಯ
ಸಂಘಟನೆಯ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಪಂಪಣ್ಣ ನಾಯಕ್ ನೇತೃತ್ವದಲ್ಲಿ ಇಲ್ಲಿನ ಮಿನಿವಿಧಾನಸೌಧಕ್ಕೆ ತೆರಳಿ ಪ್ರತಿಭಟನೆ ನಡೆಸಿದ ಸಂಘಟಕರು, ಡ್ರಗ್ಸ್ ಮಾಫಿಯಾದ ಹಿಂದೆ ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖಂಡ ಪಂಪಣ್ಣ ನಾಯಕ್ ಮಾತನಾಡಿ, ಡ್ರಗ್ಸ್ ದಂಧೆಯಲ್ಲಿ ನಟ-ನಟಿಯರು, ಉದ್ಯಮಿಗಳು, ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂಥ ದಂಧೆಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.