ಕರ್ನಾಟಕ

karnataka

ETV Bharat / state

ಅಂಬೇಡ್ಕರ್​ಗೆ ಅವಮಾನ ಆರೋಪ.. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ.. - Board of Education vigilante campaign book

ಸಂವಿಧಾನ ಶಿಲ್ಪಿ ಡಾಯ ಬಿ ಆರ್‌ ಅಂಬೇಡ್ಕರ್​ರನ್ನು ಸರ್ಕಾರ ಅವಮಾನಿಸಿದೆ ಎಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ಅಂಬೇಡ್ಕರ್​ಗೆ ಅವಮಾನ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

By

Published : Nov 15, 2019, 11:38 PM IST

ಹೊಸಪೇಟೆ: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಹೊರಡಿಸಿರುವ ಡಾ. ಬಿ ಆರ್ ಅಂಬೇಡ್ಕರ್ ಜಾಗೃತಿ ಅಭಿಯಾನ ಮಾರ್ಗದರ್ಶನದಲ್ಲಿ ಅಂಬೇಡ್ಕರ್ ಸಂವಿಧಾನ ರಚಿಸಲ್ಲ ಎಂದು ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿದೆ.

ಅಂಬೇಡ್ಕರ್​ಗೆ ಅವಮಾನ ಆರೋಪ.. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ..
ನಗರದ ಡಾ.ಬಿ ಆರ್ ಅಂಬೇಡ್ಕರ ವೃತ್ತದಲ್ಲಿ ದಲಿತಪರ ಸಂಘಟನೆ ಮತ್ತು ಪ್ರಗತಿಪರರು ಡಾ. ಬಿ ಆರ್ ಅಂಬೇಡ್ಕರ ವೃತ್ತದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಡಾ.ಬಿ ಆರ್ ಅಂಬೇಡ್ಕರ್​ ಅಷ್ಟೇ ಬರೆದಿಲ್ಲ. ಇತರರೂ ಇದ್ದರು ಎಂದು ಸರ್ಕಾರದ ಪ್ರಸ್ತಾವನೆ ಸಲ್ಲಿಸಿದ ಅಧಿಕಾರಿ ಉಮಾಶಂಕರ್​ರನ್ನು ಕೂಡಲೇ ಶಿಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಭಾರತ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್​ ವಿಚಾರದಲ್ಲಿ ಎಲ್ಲ ಜಾತಿಯ ಮುಖಂಡರು‌ ಮತ್ತು ರಚನಾಸಭೆಯ ಸದಸ್ಯರು ಒಳಗೊಂಡಿದ್ದಾರೆ ಎಂಬ ಅಂಶವನ್ನು ಇಟ್ಟುಕೊಂಡು ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿಯಲ್ಲಿ ಹಲವು ರಾಜಕೀಯ ವ್ಯಕ್ತಿಗಳು ದಲಿತರನ್ನು ಹತ್ತಿಕ್ಕುವ ಸಂಚನ್ನು ರೂಪಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸಿರುವ ಜಾಗೃತ ಅಭಿಯಾನ ಪುಸ್ತಕವನ್ನು ರದ್ದುಗೊಳಿಸಬೇಕು. ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ನಿರ್ದೇಶಕರನ್ನು ವಜಾಗೊಳಿಸಬೇಕೆಂದು ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದರು.

ABOUT THE AUTHOR

...view details