ಕೊಪ್ಪಳ :ನಗರದ ಬನ್ನಿಕಟ್ಟೆ ಪ್ರದೇಶದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ನಿನ್ನೆ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಲು ನಿರ್ಲಕ್ಷತೆಯೇ ಕಾರಣ.ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಅಂತಾ ಆಗ್ರಹಿಸಿ ನಗರದಲ್ಲಿಂದು ವಿವಿಧ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಾವಿಗೆ ನಿರ್ಲಕ್ಷತೆ ಕಾರಣ.. ವಿವಿಧ ಸಂಘಟನೆಗಳ ಕಿಡಿ.. - Koppal district news
ಕೊಪ್ಪಳದಲ್ಲಿ ಬಿಸಿಎಂ ಹಾಸ್ಟೆಲ್ ನ ಐವರು ವಿದ್ಯಾರ್ಥಿಗಳು ಸಾವನ್ನಪ್ಪಲು ಅಧಿಕಾರಿಗಳ ನಿರ್ಲಕ್ಷತೆ ಕಾರಣ ಎಂದು ಆರೋಪಿಸಿ ಎಐಡಿಎಸ್ಒ, ಎಸ್ಎಫ್ಐ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ, ಎಸ್ಎಫ್ಐ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜ್‌ನಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಹಶೀಲ್ದಾರ್ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಸಾವಿಗೆ ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್, ಸಿಬ್ಬಂದಿಯ ನಿರ್ಲಕ್ಷತೆ ಕಾರಣ. ಅವರೆಲ್ಲಾ ವಿದ್ಯಾರ್ಥಿಗಳ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಮೃತಪಟ್ಟಿರುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.