ಕುಷ್ಟಗಿ (ಕೊಪ್ಪಳ): ಕೋವಿಡ್ ವೈರಾಣುವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅಗತ್ಯ ಸುರಕ್ಷತಾ ಕ್ರಮಗಳಿಗೆ ಒತ್ತಾಯಿಸಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನರೇಗಾ ಯೋಜನೆಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಅವರಿಗೆ ಮನವಿ ಸಲ್ಲಿಸಿದರು.
ಕೋವಿಡ್ ನಿಯಂತ್ರಿಸಲು ಅಗತ್ಯ ಸುರಕ್ಷತಾ ಕ್ರಮಗಳಿಗೆ ಒತ್ತಾಯಿಸಿ ಪ್ರತಿಭಟನೆ
ಕೊರೊನಾ ವೈರಸ್ ನಿಯಂತ್ರಿಸಲು ಅಗತ್ಯ ಸುರಕ್ಷತಾ ಕ್ರಮಗಳಿಗೆ ಒತ್ತಾಯಿಸಿ ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನರೇಗಾ ಯೋಜನೆಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಮನವಿ ಸ್ವೀಕರಿಸಿ ಮಾತನಾಡಿದ ಅರುಣಕುಮಾರ ದಳವಾಯಿ ಅವರು, ನರೇಗಾ ಯೋಜನೆಯಲ್ಲಿ ಕೂಲಿಕಾರರ ಸುರಕ್ಷತೆಗೆ ಆದ್ಯತೆ ವಹಿಸಲಾಗಿದೆ. ಸೀಲ್ಡೌನ್ ಪ್ರದೇಶದ ಕೂಲಿಕಾರರಿಗೆ 14 ದಿನಗಳ ಕೆಲಸವನ್ನು ಮುಂದೂಡಲಾಗುವುದು. ಸೀಲ್ಡೌನ್ ಅವಧಿ ಮುಗಿದ ಬಳಿಕ ಕೆಲಸ ನೀಡುವಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಪ್ರತಿಭಟನೆ ನೇತೃತ್ವವಹಿಸಿದ್ದ ಆರ್.ಕೆ.ದೇಸಾಯಿ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕನಿಷ್ಠ 200 ದಿನಗಳ ಉದ್ಯೋಗ, 600 ರೂ.ಗೆ ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.