ಗಂಗಾವತಿ: ರಾಜ್ಯ ಸರ್ಕಾರದ ಆದೇಶ ಮೀರಿಯೂ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶುಲ್ಕ ಹೆಚ್ಚಳ: ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ! - ಗಂಗಾವತಿ ಪ್ರತಿಭಟನೆ ಲೆಟೆಸ್ಟ್ ನ್ಯೂಸ್
ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
Protest by students in Gangavati
ಆನೆಗೊಂದಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ ಪದವಿ ಹಂತದ ನಾನಾ ಸೆಮಿಸ್ಟರ್ ನ ವಿದ್ಯಾರ್ಥಿಗಳು, ಪ್ರಾಚಾರ್ಯ ಜಿ.ಎನ್. ಹೆಬಸೂರು ವಿರುದ್ಧ ಘೋಷಣೆ ಕೂಗಿದರು.
ಸಂಘಟನೆಯ ಗಂಗಾವತಿ ಘಟಕದ ಅಧ್ಯಕ್ಷ ಗ್ಯಾನೇಶ ಕಡಗದ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಪದವಿ ಹಂತದ ಪ್ರವೇಶ ಆರಂಭವಾಗಿದೆ. ಗಂಗಾವತಿಯಲ್ಲಿ ಸರ್ಕಾರದ ಆದೇಶ ಮೀರಿ ನಾನಾ ಶುಲ್ಕಗಳ ನೆಪದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.