ಕೊಪ್ಪಳ: ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ - koppal news
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ವತಿಯಿಂದ ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
![ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ Protest demanding the fulfillment of bisiyoota workers](https://etvbharatimages.akamaized.net/etvbharat/prod-images/768-512-8392874-30-8392874-1597232645973.jpg)
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಬಿಸಿಯೂಟ ನೌಕರರು ಕೋವಿಡ್-19ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಬದಲು ಆಹಾರಧಾನ್ಯ ನೀಡಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಿಂದ ಬಿಸಿಯೂಟ ನೌಕರರ ವೇತನ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಾಗೂ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಆದರೆ, ನಮ್ಮ ಮನವಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಸರ್ಕಾರ ಬಾಕಿ ನಾಲ್ಕು ತಿಂಗಳ ವೇತನ ಸೇರಿ ಶಾಲೆ ಆರಂಭವಾಗುವವರೆಗೂ ವೇತನ ನೀಡಬೇಕು ಹಾಗೂ ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.