ಗಂಗಾವತಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಸಾವಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತಳ ಕುಟುಂಬದವರು ಕಾರಟಗಿಯ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.
ವೈದ್ಯರ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ - women died by Doctor's neglect in gangavathi
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಸಾವಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಗಂಗಾವತಿಯ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದರು.
ಮೃತಳನ್ನು ಕಾರಟಗಿ ಪಟ್ಟಣದ ಜೆಪಿ ನಗರದ ನಾಗಮ್ಮ (24) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಹೊಟ್ಟೆನೋವು ಎಂಬ ಕಾರಣಕ್ಕೆ ಈ ಮಹಿಳೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದಿದ್ದರಿಂದ ಇವರು ಮೃತಪಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ.
ಮಹಿಳೆಗೆ ಒಂದು ವರ್ಷದ ಹಿಂದೆ ಹೆರಿಗೆ ಮಾಡಿಸಲಾಗಿತ್ತು. ಆಗ ವೈದ್ಯೆ ಶಕುಂತಲಾ ಗರ್ಭಕೋಶದಲ್ಲಿ ಕಾಪರ್ ಟಿ ಅಳವಡಿಸಿದ್ದರು. ಆದರೆ ಅದನ್ನು ಕಿಬ್ಬೊಟ್ಟಿಯ ಬದಲಿಗೆ ಬೇರೆಡೆ ಅಳವಡಿಸಿದ್ದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸಂಬಂಧಿಕರು ಆರೋಪಿಸಿದರು. ನಂತರ ಪೊಲೀಸರ ರಾಜಿ ಬಳಿಕ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ತೆಗೆದುಕೊಂಡು ಹೋದರು.