ಕೊಪ್ಪಳ:ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲಾಗಿರುವ ಎಲ್ಲ ಜನವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘನೆಗಳ ಕಾರ್ಯಕರ್ತರು ಜಂಟಿಯಾಗಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಕೊಪ್ಪಳ: ಹೊಸ ಕಾಯ್ದೆಗಳ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ
ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕೊಪ್ಪಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ನಗರದ ಎಪಿಎಂಸಿ ಆವರಣದಲ್ಲಿರುವ ಟೆಂಡರ್ ಹಾಲ್ ಬಳಿಯಿಂದ ಬಸವೇಶ್ವರ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಸವೇಶ್ವರ ಸರ್ಕಲ್ ನಲ್ಲಿ ಕೆಲಕಾಲ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲಾಗಿದೆ. ಇದು ರೈತರ, ಕಾರ್ಮಿಕರ ಮರಣ ಶಾಸನ ಬರೆಯುವ ಕಾನೂನುಗಳಾಗಿವೆ. ಈ ಎಲ್ಲ ಜನವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.