ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಯತ್ನಾಳ್‌ ಅಣುಕು ಶವ.. ಬಾಯ್‌ ಬಾಯ್ ಬಡ್ಕೊಂಡ್ರು.. ಲಬೋ ಲಬೋ ಹೊಯ್ಡೊಂಡ್ರು - ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ನಗರದ ಕೇಂದ್ರೀಯ ಬಸ್ ನಿಲ್ದಾಣದಿಂದ ಬೆಳಗ್ಗೆ ಹೊರಟಿದ್ದ ಬಸ್​ಗಳನ್ನು ತಡೆದು ಬಸ್ ಸಂಚಾರವನ್ನು ಸ್ಥಗಿತಗೊಳಿಸುವಂತೆ ತಾಕೀತು ಮಾಡಿದರು..

protest in koppala: supporst to karnataka band
ಬಂದ್​ಗೆ ಬೆಂಬಲ

By

Published : Dec 5, 2020, 11:09 AM IST

ಕೊಪ್ಪಳ :ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರೆ ನೀಡಲಾಗಿರುವ ಬಂದ್​​ಗೆ ಬೆಂಬಲಿಸಿ ಕೊಪ್ಪಳದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ಪ್ರಾರಂಭವಾಗಿದೆ.

ಬಾಯ್‌ ಬಾಯ್‌ ಬಡ್ಕೊಂಡ ಪ್ರತಿಭಟನಾಕಾರರು..

ಬೆಳಗ್ಗೆಯಿಂದಲೇ ರಸ್ತೆಗಿಳಿದಿರುವ ಕಾರ್ಯಕರ್ತರು, ನಗರದ ಕೇಂದ್ರೀಯ ಬಸ್ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೇಂದ್ರೀಯ ಬಸ್ ನಿಲ್ದಾಣದಿಂದ ಬೆಳಗ್ಗೆ ಹೊರಟಿದ್ದ ಬಸ್​ಗಳನ್ನು ತಡೆದು ಬಸ್ ಸಂಚಾರವನ್ನು ಸ್ಥಗಿತಗೊಳಿಸುವಂತೆ ತಾಕೀತು ಮಾಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿಯನ್ನು ಹೊತ್ತು ಅಣುಕು ಶವಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಅಣುಕು ಶವದ ಮುಂದೆ ಲಬೋ ಲಬೋ ಅಂತಾ ಬಾಯ್‌ ಬಾಯ್‌ ಬಡ್ಕೊಂಡು ಕನ್ನಡ ಪರ ಹೋರಾಟಗಾರರು ವಿಭಿನ್ನವಾಗಿ ಪ್ರತಿಭಟಿಸಿದ್ರು. ಇನ್ನು ಬಂದ್ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ABOUT THE AUTHOR

...view details