ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ: ಚಿಕಿತ್ಸೆಗಾಗಿ ಜನರ ಪರದಾಟ

ಸರ್ಕಾರಿ ಉಪ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಲಸಕ್ಕೆ ಹಾಜರಾಗದ ಕಾರಣ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜನರ ಪರದಾಟ
ಜನರ ಪರದಾಟ

By

Published : Sep 24, 2020, 9:21 PM IST

ಗಂಗಾವತಿ: ಇಲ್ಲಿನ ಸರ್ಕಾರಿ ಉಪ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಲಸಕ್ಕೆ ಹಾಜರಾಗದ ಕಾರಣ ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿವಿಧ ಬೇಡಿಕೆಗಳ ಈಡೇರೆಕೆಗಾಗಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ

ಗುಣಮಟ್ಟದ ಚಿಕಿತ್ಸೆ ಹಾಗೂ ಸುಧಾರಿತ ತಾಂತ್ರಿಕ ಪರಿಕರಗಳ ಸೌಲಭ್ಯಗಳಿಂದಾಗಿ ಗಮನ ಸೆಳೆದಿದ್ದ ಇಲ್ಲಿನ ಸರ್ಕಾರಿ ಉಪ ಆಸ್ಪತ್ರೆಯಲ್ಲಿ ಶೇ.70ರಷ್ಟು ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಇವರು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಅನಿರ್ಧಿಷ್ಟಾವಧಿ ಧರಣಿ, ಪ್ರತಿಭಟನೆ ಹಮ್ಮಿಕೊಂಡಿರುವುದು ಸಮಸ್ಯೆಗೆ ಕಾರಣವಾಗಿದೆ.

ಸಾಮಾನ್ಯ ರೋಗಿಗಳು ಹಾಗೂ ತುರ್ತು ಚಿಕಿತ್ಸೆ ಪಡೆಯಲು ಇಲ್ಲಿನ ಆಸ್ಪತ್ರೆಗೆ ಬಂದ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

...view details